ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಜರಾಯಿ ಇಲಾಖೆಗೆ ಸುಳ್ವಾಡಿ ದೇವಸ್ಥಾನ: ಚರ್ಚಿಸಿ ತೀರ್ಮಾನ–ಸಚಿವ ಪರಮೇಶ್ವರನಾಯ್ಕ

Last Updated 29 ಡಿಸೆಂಬರ್ 2018, 19:31 IST
ಅಕ್ಷರ ಗಾತ್ರ

ಹರಪನಹಳ್ಳಿ: ‘ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ‘ವಿಷ ಪ್ರಸಾದ’ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಕುರಿತು ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಪಟ್ಟಣಕ್ಕೆ ಶನಿವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಇದು ಸಾಮಾನ್ಯ ಘಟನೆಯಲ್ಲ. ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು. ಸುಳ್ವಾಡಿ ದೇವಸ್ಥಾನಕ್ಕೆ ಶೀಘ್ರ ಭೇಟಿ ನೀಡಿ ಪರಿಶೀಲಿಸುತ್ತೇನೆ. ದೇವಾಲಯದಲ್ಲಿ ಪ್ರಸಾದ ತಯಾರಿಸುವ ಬಗ್ಗೆಯೂ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಮುಖಂಡರಲ್ಲಿ ಬಣ ಇಲ್ಲ: ‘ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಬಣವಿಲ್ಲ. ಪಕ್ಷ ನಿಷ್ಠೆ ಗುರುತಿಸಿ ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಿದ್ದಾರೆ’ ಎಂದರು.

‘ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ರಮೇಶ ಜಾರಕಿಹೊಳಿ ಅವರ ಅಸಮಾಧಾನ ಬೇಗ ಶಮನಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT