ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ ಅಂತ್ಯದೊಳಗೆ 60 ಕೋವಿಡ್ ಟೆಸ್ಟಿಂಗ್ ಲ್ಯಾಬ್ ಗುರಿ: ಸಚಿವ ಡಾ.ಕೆ.ಸುಧಾಕರ್

Last Updated 1 ಮೇ 2020, 11:43 IST
ಅಕ್ಷರ ಗಾತ್ರ

ಬೆಂಗಳೂರು: ಫೆಬ್ರವರಿ ಆರಂಭದಲ್ಲಿ 2 ಲ್ಯಾಬ್‌ಗಳಿದ್ದ ಕರ್ನಾಟಕದಲ್ಲಿ ಈಗ 26 ಲ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಮೇ ಅಂತ್ಯದೊಳಗೆ 60 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ 2 ಪ್ರಯೋಗಾಲಯ ಹೊಂದುವುದು ಸರ್ಕಾರದ ಗುರಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಏಪ್ರಿಲ್ ಅಂತ್ಯದೊಳಗೆ ರಾಜ್ಯದಲ್ಲಿ 27 ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದರು. ಇದೀಗ 26 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ತ್ವರಿತ ಗತಿಯಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಿ ಪ್ರತ್ಯೇಕಿಸಲು ಸಾಧ್ಯವಾಗುತ್ತಿದ್ದು, ರಾಜ್ಯದಲ್ಲಿ ಕೊರೊನ ವೈರಾಣು ಹರಡದಂತೆ ತಡೆಗಟ್ಟಲು ಇದು ಬಹಳ ಮಟ್ಟಿಗೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್ ಟೆಸ್ಟಿಂಗ್ ಲ್ಯಾಬ್‌ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ಆರ್‌ಟಿ‌ಪಿ‌ಸಿ‌ಆರ್ ಲ್ಯಾಬ್- 15, ಸಿ‌ಬಿ‌ಎನ್‌ಎ‍‍ಎ‍ಟಿ- 03 ಮತ್ತು 08 ಖಾಸಗಿ ಲ್ಯಾಬ್‌ಗಳು ಕಾರ್ಯ ನಿರ್ವಹಿಸುತ್ತಿವೆ.

4T (ಟ್ರೇಸ್, ಟ್ರ್ಯಾಕ್, ಟೆಸ್ಟ್ ಮತ್ತು ಟ್ರೀಟ್) ಯೋಜನೆಯೊಂದಿಗೆ ಕರ್ನಾಟಕವು ಅತ್ಯಂತ ಸಮರ್ಥವಾಗಿ ಕೋವಿಡ್ ಸಂಕಷ್ಟವನ್ನು ಎದುರಿಸುತ್ತಿದ್ದು, ಹೆಚ್ಚಿನ ಪ್ರಯೋಗಾಲಯಗಳನ್ನು ಹೊಂದುವುದರಿಂದ ಹೆಚ್ಚಿನ ಟೆಸ್ಟ್‌ಗಳನ್ನು ಕಡಿಮೆ ಅವಧಿಯಲ್ಲಿ ನಡೆಸಬಹುದಾಗಿದೆ. ಇದರಿಂದ ಚಿಕಿತ್ಸೆಗೆ ಅನುಕೂಲವಾಗಿದ್ದು, ಕೋವಿಡ್ ನಿಯಂತ್ರಿಸುವ ಮತ್ತು ಸೋಂಕಿತರನ್ನು ಗುಣಮುಖರನ್ನಾಗಿ ಮಾಡುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT