ಮಂಗಳವಾರ, ಜೂಲೈ 7, 2020
28 °C

ಬಂಡೀಪುರ ಅರಣ್ಯಕ್ಕೆ ಬೆಂಕಿ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಗೋಪಾಲಸ್ವಾಮಿ ಬೆಟ್ಟದ ವಲಯಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ತಾಲ್ಲೂಕಿನ ಕಳ್ಳಿಪುರ ಗ್ರಾಮದ ಅರುಣ್ ಕುಮಾರ್ ಎಂಬುವರನ್ನು ಗುರುವಾರ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಅರುಣ್ ಕುಮಾರ್ ಬೆಂಕಿಹಾಕಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಸಾರ್ವಜನಿಕರು ನೀಡಿದ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಸಫಾರಿ ಆರಂಭ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿ ನಂದಿರುವುದರಿಂದ ಮಾರ್ಚ್ 1ರಿಂದ ಸಫಾರಿ ಆರಂಭವಾಗಲಿದೆ. ಗೋಪಾಲಸ್ವಾಮಿ ಬೆಟ್ಟದ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು