ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷಡ್ಯಂತ್ರದ ಅನುಮಾನ, 2 ದಿನಗಳಲ್ಲಿ ಬಯಲು: ಪ್ರಿಯಾಂಕ್‌ ಖರ್ಗೆ

Last Updated 2 ಮಾರ್ಚ್ 2019, 16:16 IST
ಅಕ್ಷರ ಗಾತ್ರ

ಚಾಮರಾಜನಗರ: ‘ವಾಯುಪಡೆ ದಾಳಿಯ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಯನ್ನು ಗಮನಿಸಿದರೆ, ಇಡೀ ಬೆಳವಣಿಗೆಯ ಹಿಂದೆ ಷಡ್ಯಂತ್ರ ಇರುವ ಅನುಮಾನ ಮೂಡುತ್ತದೆ. ಎರಡು ಮೂರು ದಿನಗಳಲ್ಲಿ ಎಲ್ಲವೂ ಬಯಲಾಗಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಹೇಳಿದರು.

ವಾಯುಪಡೆ ದಾಳಿಯಿಂದ ಬಿಜೆಪಿಗೆ ರಾಜ್ಯದಲ್ಲಿ 22 ಸ್ಥಾನಗಳು ದೊರಕಲಿವೆ ಎಂಬ ಯಡಿಯೂರಪ್ಪ ಹೇಳಿಕೆಗೆಜಿಲ್ಲೆಯ ಬಿರಿಗಿರಿರಂಗನಾಥ ಸ್ವಾಮಿ ಬೆಟ್ಟದಲ್ಲಿ ಪ್ರತಿಕ್ರಿಯಿಸಿದರು. ‘ಮನಸ್ಸಿನಲ್ಲಿ ಇದ್ದುದನ್ನು ಹೇಳಿದ್ದಾರೆ. ಮತಕ್ಕಾಗಿ ಯಾವ ಮಟ್ಟಕ್ಕೆಬೇಕಾದರೂ ಹೋಗುತ್ತೇವೆಎಂಬುದನ್ನು ತೋರಿಸುತ್ತದೆ. ಆಪರೇಷನ್‌ ಕಮಲ ಮಾಡಿರುವುದಾಗಿ ಅವರೇ ಒಪ್ಪಿಕೊಂಡಿದ್ದಾರೆ’ ಎಂದರು.

‘44 ಯೋಧರನ್ನು ಬಲಿ ಪಡೆದು 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಮಾತನ್ನು ಅರ್ಥೈಸಿಕೊಳ್ಳಬೇಕಾಗುತ್ತದೆ. ವಾಯು ದಾಳಿ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಅಂತರರಾಷ್ಟ್ರೀಯ ಮಾಧ್ಯಮಗಳು ಮತ್ತು ರಾಷ್ಟ್ರೀಯ ಮಾಧ್ಯಮಗಳ ವರದಿಗಳನ್ನು ಎಲ್ಲರೂ ಗಮನಿಸಿದ್ದಾರೆ. ರಕ್ಷಣಾ ಸಚಿವರು ಇದುವರೆಗೆ ಒಂದು ಹೇಳಿಕೆಯನ್ನೂ ನೀಡಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT