ರಾಜ್ಯದಿಂದ ಸ್ಪರ್ಧೆ: ರಾಹುಲ್‌ ಮೌನ

ಬುಧವಾರ, ಏಪ್ರಿಲ್ 24, 2019
32 °C

ರಾಜ್ಯದಿಂದ ಸ್ಪರ್ಧೆ: ರಾಹುಲ್‌ ಮೌನ

Published:
Updated:

ಕಲಬುರ್ಗಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಬೇಡಿಕೆಗೆ ರಾಹುಲ್‌ ಗಾಂಧಿ ಹಾಗೂ ಪಕ್ಷದ ಹಿರಿಯ ಮುಖಂಡರು ಮೌನ ವಹಿಸಿದರು.

ನಗರದಲ್ಲಿ ನಡೆದ ಕಾಂಗ್ರೆಸ್‌ ಪರಿವರ್ತನಾ ರ್‍ಯಾಲಿಯಲ್ಲಿ ಮಾತನಾಡಿದ ದಿನೇಶ್‌, ‘ರಾಹುಲ್‌ಜಿ ನೀವು ಕರ್ನಾಟಕದಿಂದ ಸ್ಪರ್ಧಿಸಿ. ನೀವು ದಕ್ಷಿಣ ಭಾರತದ ಪ್ರತಿನಿಧಿಯಾಗಿ ಲೋಕಸಭೆಯಲ್ಲಿ ನಮ್ಮ ಧ್ವನಿಯಾಗಬೇಕು’ ಎಂದು ಮನವಿ ಮಾಡಿದರು.

‘ರಾಹುಲ್‌ ಅವರು ರಾಜ್ಯದಿಂದಲೇ ಸ್ಪರ್ಧಿಸಬೇಕು ಎಂದು ಬಯಸುವವರು ಕೈ ಎತ್ತಿ’ ಎಂದಾಗ ಜನ ಕೈ ಎತ್ತಿ ಸಹಮತ ಸೂಚಿಸಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಈ ವಿಷಯವನ್ನು ಪ್ರಸ್ತಾಪಿಸಲೇ ಇಲ್ಲ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !