ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 425 ತಲುಪಿದ ಕೋವಿಡ್‌–19 ಪ್ರಕರಣ; ನಾಲ್ಕು ತಿಂಗಳ ಮಗುವಿಗೆ ಸೋಂಕು

Last Updated 22 ಏಪ್ರಿಲ್ 2020, 7:55 IST
ಅಕ್ಷರ ಗಾತ್ರ

ಬೆಂಗಳೂರು: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಸಾಗಿದ್ದು, ಏಪ್ರಿಲ್‌ 21ರ ಸಂಜೆ 5ರಿಂದ ಏಪ್ರಿಲ್‌ 22ರ ಮಧ್ಯಾಹ್ನ 12ರ ವರೆಗೂ ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ 7 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನಾಲ್ಕು ತಿಂಗಳ ಮಗುವಿಗೂ ಕೊರೊನಾ ವೈರಸ್ ಸೋಂಕು ತಗುಲಿದ್ದು,ಈವರೆಗೂ ಒಟ್ಟು 425 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿವೆ. ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. 129 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದ 54 ವರ್ಷ ಮತ್ತು 28 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಲಬುರ್ಗಿಯ ಐವರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಬೆಳಗಿನ ಹೆಲ್ತ್‌ ಬುಲೆಟಿನಲ್ಲಿ ತಿಳಿಸಿದೆ.

ನಾಲ್ಕು ತಿಂಗಳ ಮಗು ಸೇರಿ ಮತ್ತೆ ಐವರಿಗೆ ಕೋವಿಡ್-19

ನಾಲ್ಕು ತಿಂಗಳ ಮಗು ಸೇರಿದಂತೆ ಕಲಬುರ್ಗಿ ಜಿಲ್ಲೆಯಲ್ಲಿ ಬುಧವಾರ ‌ಮತ್ತೆ ಐವರಿಗೆ ಕೋವಿಡ್ 19 ದೃಢಪಟ್ಟಿದೆ.46 ವರ್ಷದ ಮಹಿಳೆ, 57 ವರ್ಷದ ಪುರುಷ, 36 ವರ್ಷದ ಮಹಿಳೆ ಹಾಗೂ 25 ವರ್ಷದ ಮಹಿಳೆಯಲ್ಲಿ ‌ಸೋಂಕು ಕಾಣಿಸಿಕೊಂಡಿದೆ. 25 ವರ್ಷದ ಮಹಿಳೆನಾಲ್ಕು ತಿಂಗಳಮಗುವಿನ ತಾಯಿಯಾಗಿದ್ದು,ಅವರನ್ನು ‌ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ‌ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ಕ್ಕೇರಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ನಗರದ ವಿವಿಧ ಬಡಾವಣೆಗಳನ್ನು ಸೀಲ್ ಡೌನ್ ಮಾಡಲು ‌ಪೊಲೀಸರು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT