ಇಂದಿನಿಂದ ಕ್ಷಯ ರೋಗ ನಿವಾರಣೆ ಅಭಿಯಾನ
ರಾಜ್ಯದಲ್ಲಿ 82 ಸಾವಿರ ಕ್ಷಯ ಪ್ರಕರಣ

ಬೆಂಗಳೂರು: ನಿಕ್ಷಯ್ ಪೋರ್ಟಲ್‌ನಲ್ಲಿರುವ ಅಂಕಿಅಂಶಗಳ ಪ್ರಕಾರ ಕಳೆದ ವರ್ಷ ರಾಜ್ಯದಲ್ಲಿ 82,550 ಮಂದಿ ಕ್ಷಯ ರೋಗದ (ಟಿಬಿ) ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರ 2025ರ ವೇಳೆಗೆ ಕ್ಷಯ ಮುಕ್ತ ಭಾರತ ನಿರ್ಮಾಣದ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಜುಲೈ15ರಿಂದ 27ರವರೆಗೆ ರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದೆ.
2017ರ ಜನವರಿಯಿಂದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಇದೀಗ 6ನೇ ಹಂತದಲ್ಲಿ ರಾಜ್ಯದ 30 ಜಿಲ್ಲೆಗಳಿಂದ 1.14 ಕೋಟಿ ಜನರನ್ನು ತಲುಪುವ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.