ಬುಧವಾರ, ಜೂಲೈ 8, 2020
25 °C

‘ಪ್ರಜಾವಾಣಿ’ ವರದಿ ಪರಿಣಾಮ: ಗೋಶಾಲೆಗಳಿಗೆ ₹24 ಲಕ್ಷ ಅನುದಾನ ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೋಶಾಲೆಗಳಿಗೆ ಸರ್ಕಾರ ₹ 24 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಬಿಡುಗಡೆ ಮಾಡಲಾಗಿದೆ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಹಾಗೂ ಉಡುಪಿ ಜಿಲ್ಲೆಯ ಎರಡು ಗೋಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದನ್ನು ಜಾನುವಾರುಗಳಿಗೆ ಮೇವು ಹಾಗೂ ಇನ್ನಿತರೆ ಆರೈಕೆಗೆ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ. 

‘ಗೋಶಾಲೆಗಳಿಗೂ ತಟ್ಟಿದ ಬಿಸಿ’ ಶೀರ್ಷಿಕೆಯಲ್ಲಿ ಮಂಗಳವಾರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಈ ಕುರಿತ ವರದಿ ಪ್ರಕಟವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.