ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪುನರ್ಜನ್ಮಕ್ಕೆ ಎ. ಮಂಜು ಯತ್ನ

ಸ್ಥಳೀಯ ಬ್ಯಾಂಕ್‌ ಚುನಾವಣೆಯಲ್ಲಿ ಮಂಜುಗೆ ಗೆಲುವು
Last Updated 28 ಜನವರಿ 2020, 19:59 IST
ಅಕ್ಷರ ಗಾತ್ರ

ಹಾಸನ: ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಚಿವ ಎ.ಮಂಜು ಅವರು ಸ್ಥಳೀಯ ಬ್ಯಾಂಕ್‌ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿ, ಬಳಿಕ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಪೈಪೋಟಿ ನೀಡಿದ್ದ ಅವರು, ಅರಕಲಗೂಡು ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಬ್ಯಾಂಕ್‌ (ಪಿಎಲ್‌ಡಿಬಿ) ನಿರ್ದೇಶಕ ಸ್ಥಾನಕ್ಕೆ ರುದ್ರಪಟ್ಟಣ ಕ್ಷೇತ್ರ
ದಿಂದ ಸ್ಪರ್ಧಿಸಿ, ಗೆದ್ದಿರುವುದು ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ. ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಥವಾ ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಂಜು, ಅದಕ್ಕೆ ಅರ್ಹತೆ ಪಡೆಯಲೆಂದು ಈ ಬ್ಯಾಂಕ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪರಾಭವಗೊಂಡಿದ್ದ ಅವರು ರಾಜಕೀಯ ಪುನರ್ಜನ್ಮ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಬ್ಯಾಂಕ್‌ನ 14 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ ಆರು ಸದಸ್ಯರು ಸೇರಿದಂತೆ ಏಳು ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಉಳಿದ ಸ್ಥಾನಗಳಿಗೆ ಜ.25ರಂದು ಚುನಾವಣೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT