ಶನಿವಾರ, ಮೇ 30, 2020
27 °C

ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಇಲ್ಲಿನ ಅನಗೋಳದ ಬೆಂಡಿಗೇರಿ ಚಾಳದಲ್ಲಿ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವೇಂದ್ರಪ್ಪ ಹಡಪದ (42) ಮೃತ. ಮೂಲತಃ ಸವದತ್ತಿಯ ಅವರು ಸಲೂನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿ ಬಾಡಿಗೆ ಮನೆಯಲ್ಲಿದ್ದರು.

‘ಪತಿ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮದ್ಯ ಸೇವಿಸುವ ಚಟವಿತ್ತು. ಮನೆಯವರು ಹಾಗೂ ಸಲೂನ್ ಮಾಲೀಕರು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಲಾಕ್‌ಡೌನ್‌ ಆದಾಗಿನಿಂದ ಅಂಗಡಿಯೂ ಬಂದ್ ಆಗಿತ್ತು. ಮದ್ಯ ಸಿಗಲಿಲ್ಲವೆಂದರೆ  ಬದುಕಲಾಗುವುದಿಲ್ಲ ಎಂದು ಅಳುತ್ತಾ ಫೋನ್ ಕರೆ ಕಟ್ ಮಾಡಿದ್ದರು’ ಎಂದು ಪತ್ನಿ ಹೇಮಾವತಿ ಟಿಳಕವಾಡಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು