ಶನಿವಾರ, ಏಪ್ರಿಲ್ 4, 2020
19 °C

ಎಸ್ಸೆಸ್ಸೆಲ್ಸಿ ಪರೀಕ್ಷೆ; ನಾಳೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಕೊರೊನಾ ವೈರಸ್‌ ಭೀತಿ ಕಾರಣಕ್ಕೆ ಮುಂದೂಡಬೇಕೇ ಅಥವಾ ನಿಗದಿಯಂತೆ ನಡೆಸಬೇಕೇ ಎಂಬ ಬಗ್ಗೆ ಸೋಮವಾರ (ಮಾರ್ಚ್‌ 23) ನಿರ್ಧರಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಶನಿವಾರ ಇಲ್ಲಿ ಹೇಳಿದರು. 

‘ಇದೇ 27ರಿಂದ ಪರೀಕ್ಷೆ ನಿಗದಿ ಯಾಗಿದೆ. ಇನ್ನೂ ಐದಾರು ದಿನಗಳ ಕಾಲಾವಕಾಶ ಇದೆ. ಸೋಮವಾರ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಎಸ್‌.ಸುಧಾಕರ್‌ ಜೊತೆ ಚರ್ಚೆ ನಡೆಸಿ ಪರಿಸ್ಥಿತಿ ಅವಲೋಕಿಸ ಲಾಗುವುದು. ಪರೀಕ್ಷೆ ನಡೆಸುವುದಾದರೆ, ಕೈಗೊಳ್ಳಬೇಕಾದ ಕ್ರಮಗಳ
ಬಗ್ಗೆಯೂ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿರಿಸಿಕೊಂಡು ಶಿಕ್ಷಣ ಇಲಾಖೆಯು ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು. 

ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಇನ್ನೂ ಸಮಯ ಇರುವುದರಿಂದ ಆ ರೀತಿ ಹೇಳಿರಬಹುದು. ಸೋಮವಾರ ಅವರ ಜೊತೆಗೂ ಚರ್ಚೆ ಮಾಡುತ್ತೇವೆ’ ಎಂದರು.

‘ಪರೀಕ್ಷೆಯ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ವಿದ್ಯಾರ್ಥಿ ಗಳೂ ಗೊಂದಲಕ್ಕೆ ಒಳಗಾಗಬೇಕಿಲ್ಲ’ ಎಂದು ನುಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು