ಸೋಮವಾರ, ಡಿಸೆಂಬರ್ 16, 2019
17 °C

ವಿವಿಧ ಅಕಾಡೆಮಿಗಳ ಅಧ್ಯಕ್ಷರ ಪರಿಚಯ ಸಭೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕಗೊಂಡವರು ಪರಸ್ಪರ ಪರಿಚಯ ಮಾಡಿಕೊಳ್ಳುವ ವಿನೂತನ ಸಭೆಯೊಂದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಹಮ್ಮಿಕೊಂಡಿದೆ.

ವಿಕಾಸಸೌಧದಲ್ಲಿ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸದಸ್ಯರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಬಗ್ಗೆ ವಿಚಾರ ವಿನಿಮಯ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ನೇಮಕಗೊಂಡವರಲ್ಲಿ ಬಹುತೇಕರು ಅಕಾಡೆಮಿಗಳಿಗೆ ಹೊಸಬರಾಗಿದ್ದು, ಅವರಿಗೆ ಅಕಾಡೆಮಿಗಳ ಕಾರ್ಯವ್ಯಾಪ್ತಿ ಮತ್ತು ಅಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಆಯಾ ಕ್ಷೇತ್ರಗಳ ಹಿರಿಯ ವ್ಯಕ್ತಿಗಳು ಮಾರ್ಗದರ್ಶನ ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಂಸ್ಕೃತಿ ಸಚಿವ ಸಿ.ಟಿ.ರವಿ ವಹಿಸಲಿದ್ದಾರೆ.

ಪ್ರತಿಕ್ರಿಯಿಸಿ (+)