ಬುಧವಾರ, ಏಪ್ರಿಲ್ 1, 2020
19 °C
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ದೂರು ಹಿನ್ನೆಲೆ

ಉತ್ತರಕನ್ನಡ: ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಅರಣ್ಯಾಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಅರಣ್ಯಾಧಿಕಾರಿ ಚಂದ್ರಕಾಂತ ನಾಯ್ಕ ಅವರ ಮನೆ ಮೇಲೆ ಮಂಗಳೂರಿನ ಎಸಿಬಿ ಡಿವೈಎಸ್ ಪಿ ಸುದೀರ್ ಹೆಗಡೆ ನೇತ್ರತ್ವದಲ್ಲಿ ದಾಳಿ ನಡೆದಿದೆ‌. 

ಚಂದ್ರಕಾಂತ ನಾಯ್ಕ ಅವರ ಅಂಕೋಲ ತಾಲೂಕಿನ ಆವರ್ಸಾದಲ್ಲಿನ ಮೂಲ ಮನೆ,  ಕಾರವಾರ ತಾಲೂಕಿನ ನಂದನಗದ್ದದಲ್ಲಿರುವ ಬಾಡಿಗೆ ಮನೆ, ಕಿರುವತ್ತಿಯಲ್ಲಿರುವ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಲಾಗಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಕುರಿತು ವ್ಯಕ್ತಿಯೊಬ್ಬರ ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು