ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿ ಮುಂದೆ ಹಾಜರಾದ ಪುಟ್ಟರಂಗಶೆಟ್ಟಿ

₹ 25.76 ಲಕ್ಷ ‘ಲಂಚ ಪ್ರಕರಣ’: ಸತತ ಮೂರು ಗಂಟೆ ಸಚಿವರ ವಿಚಾರಣೆ
Last Updated 16 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಸಚಿವಾಲಯದ ಟೈಪಿಸ್ಟ್‌ ಮೋಹನ್‌ ಕುಮಾರ್‌ ಬಳಿ ಸಿಕ್ಕಿದ₹ 25.76 ಲಕ್ಷ ಲಂಚದ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ಶುಕ್ರವಾರ ಸತತ ಮೂರು ಗಂಟೆ ವಿಚಾರಣೆ ನಡೆಸಿದರು.

ಮೂವರು ಅಧಿಕಾರಿಗಳ ತಂಡ ಸಚಿವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿತು. ಆದರೆ, ಯಾವುದೇ ಪ್ರಶ್ನೆಗೂ ಅವರು ಸಮರ್ಪಕ ಉತ್ತರ ನೀಡಲಿಲ್ಲ. ಇದರಿಂದಾಗಿ ತನಿಖೆ ಅಪೂರ್ಣಗೊಂಡಿದ್ದು ಪುಟ್ಟರಂಗಶೆಟ್ಟಿ ಅವರನ್ನು ಪುನಃ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಲಂಚ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚಿವರಿಗೆ ಕಳೆದ ವಾರವೇ ಎಸಿಬಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಆದರೆ, ವೈಯಕ್ತಿಕ ಕಾರಣಗಳಿಗಾಗಿ ಕಾಲಾವಕಾಶ ನೀಡುವಂತೆ ಅವರು ಕೇಳಿದ್ದರು. ವಿಧಾನಮಂಡಲ ಬಜೆಟ್‌ ಅಧಿವೇಶನ ಗುರುವಾರ ಮುಗಿದಿದ್ದು, ಶುಕ್ರವಾರವೇ ಪುಟ್ಟರಂಗಶೆಟ್ಟಿ ವಿಚಾರಣೆಗೆ ಹಾಜರಾದರು.

ಈ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಮೋಹನ್‌ ಕುಮಾರ್‌ ಬಳಿ ವಿಧಾನಸೌಧ ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿರುವ ಹಣದ ಬಗ್ಗೆ ಸಚಿವರು ಸರಿಯಾದ ಉತ್ತರ ಕೊಡಲಿಲ್ಲ. ಮೋಹನ್‌ ಕುಮಾರ್‌, ಗುತ್ತಿಗೆದಾರರಾದ ನಂದ, ಶ್ರೀನಿಧಿ, ಶ್ರೀಧರ್‌ ಹಾಗೂ ಗುರುಮೂರ್ತಿ ಜೊತೆಗಿನ ಸಂಬಂಧ ಕುರಿತು ಏನನ್ನೂ ಹೇಳಲಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.ಪುನಃ ಗುತ್ತಿಗೆದಾರರ ವಿಚಾರಣೆಗೆ ನಡೆಸಲು ಎಸಿಬಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಜ.4ರಂದು ಮೋಹನ್‌ ಚೀಲದಲ್ಲಿ ಹಣ ಕೊಂಡೊಯ್ಯುವಾಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT