ಬ್ಯೂನಸ್ ಐರಿಸ್ (ಎಎಫ್‌ಪಿ): ಕಡಿತ ಗೊಂಡಿರುವ ಕೇಬಲ್ ಟಿ.ವಿ ವ್ಯವಸ್ಥೆಯನ್ನು ಸರಿಪಡಿಸಿ ವಿಶ್ವಕಪ್ ಫುಟ್‌ಬಾಲ್ ಪಂದ್ಯಗಳನ್ನು ವೀಕ್ಷಿಸಲು ಅನುವು ಮಾಡಿಕೊಡಬೇಕೆಂದು ಅರ್ಜೆಂಟೀ ನಾದ ಜೈಲೊಂದರಲ್ಲಿ ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

‘ಕಳೆದ ಕೆಲವು ದಿನಗಳ ಹಿಂದೆ ಕೇಬಲ್ ಸಂಪರ್ಕ ಕಡಿತಗೊಂಡಿದೆ. ತಕ್ಷಣವೇ ಸಂಪರ್ಕ ಕಲ್ಪಿಸಬೇಕು. ಈ ಸಮಸ್ಯೆಗೆ ಪರಿಹಾರ ಸಿಗುವವರೆಗೂ ನಾವು ಆಹಾರ ಸೇವಿಸುವುದಿಲ್ಲ’ ಎಂದು ಇಲ್ಲಿನ ಪುಯೆರ್ಟೊ ಮ್ಯಾದ್ರಿ ನ್‌ನ ಜೈಲಿನಲ್ಲಿರುವ ಸತ್ಯಾಗ್ರಹ ನಿರತ ಒಂಬತ್ತು ಮಂದಿ ಕೈದಿಗಳು ಹೇಳಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಈ ಕೈದಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಕೂಡ ದಾಖಲಿಸಿದ್ದಾರೆ.

ಡಿ ಗುಂಪಿನಲ್ಲಿರುವ ಅರ್ಜೆಂಟೀನಾ ತಂಡವು ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಐಸ್‌ಲ್ಯಾಂಡ್ ತಂಡವನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.