ಶನಿವಾರ, ಆಗಸ್ಟ್ 8, 2020
23 °C

ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವತ್ತೊಂದರ ಖಾತೆ ಬದಲಾವಣೆ ಮಾಡಿಕೊಡಲು ₹ 12 ಸಾವಿರ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಕಂದಾಯ ನಿರೀಕ್ಷಕ ಚಂದ್ರಶೇಖರ್‌ (40) ಅವರನ್ನು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಮಾರತಹಳ್ಳಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿರುವ ಆರೋಪಿ ಚಂದ್ರಶೇಖರ್‌ ಬೆಳ್ಳಂದೂರು 150ನೇ ವಾರ್ಡ್‌ ಆಸ್ತಿ ತೆರಿಗೆ ಮೌಲ್ಯಮಾಪಕರಾಗಿದ್ದಾರೆ. ಅರ್ಜಿದಾರರಿಂದ ಆರೋಪಿ ಲಂಚ ಪಡೆಯುವಾಗ ಎಸಿಬಿ ಡಿವೈಎಸ್‌ಪಿ ಜಗದೀಶ್‌ ಬಂಧಿಸಿದ್ದಾರೆ.

ಬಂಧಿತರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು