ಭಾನುವಾರ, ಸೆಪ್ಟೆಂಬರ್ 26, 2021
21 °C

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ರಕ್ಷಣೆಗೆ ಹೋದ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಭಾರತೀನಗರ ಸಮೀಪದ ಮಣಿಗೆರೆ ಗ್ರಾಮದ ಬಳಿ ಬುಧವಾರ ರಾತ್ರಿ ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಗಾಯಗೊಂಡಿದ್ದವರನ್ನು ರಕ್ಷಿಸಲು ಹೋದ ಮೂವರು ವಿದ್ಯುತ್ ಸ್ಪರ್ಶದಿಂದ  ಸಾವನ್ನಪ್ಪಿದ್ದಾರೆ.

ಮಣಿಗೆರೆ ಗ್ರಾಮದ ದೇವರಾಜು(31) , ಬಿದರಹೊಸಹಳ್ಳಿ ಗ್ರಾಮದ ಪ್ರಸನ್ನ(45) ಮತ್ತು ಪ್ರದೀಪ್(25) ಮೃತರು. ಪ್ರಸನ್ನ ಚಾಂಷುಗರ್ ಕಾರ್ಖಾನೆ ನೌಕರ.

ಮಳವಳ್ಳಿ ಕಡೆಯಿಂದ ಭಾರತೀನಗರ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿವೆ. ಈ ವೇಳೆ ಒಳಗಿದ್ದವರು ಗಂಭೀರವಾಗಿ ಗಾಯಗೊಂಡು ಚೀರಾಡುತ್ತಿರುವುದನ್ನು ಕೇಳಿಸಿಕೊಂಡ ಮೂವರು ಕಾರಿನದ್ದವರ ರಕ್ಷಣೆಗೆ ತೆರಳಿದ್ದಾರೆ.
 
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ತುಳಿದು ಮೃತಪಟ್ಟಿದ್ದಾರೆ.

ಸ್ಥಳೀಯರು ಕೂಡಲೇ ಸೆಸ್ಕ್ ಸಿಬ್ಬಂದಿಗೆ  ಕರೆ ಮಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ನಂತರ ಕಾರಿನಲ್ಲಿದ್ದವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು