ಸೋಮವಾರ, ಅಕ್ಟೋಬರ್ 21, 2019
23 °C

ಅಪಘಾತ: ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

Published:
Updated:

ಸುಳ್ಯ: ಇಲ್ಲಿನ ಜಾಲ್ಸೂರು ಸಮೀಪದ ಮಾವಿನಕಟ್ಟೆ ಬಳಿ ಶುಕ್ರವಾರ ರಾತ್ರಿ ಬಸ್ ಮತ್ತು ಇನೋವಾ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಇನೋವಾ ಕಾರು ಸುಳ್ಯ ಕಡೆಯಿಂದ ಮಂಗಳೂರಿಗೆ ಹೋಗುತ್ತಿತ್ತು. ಬಸ್ ಸುಳ್ಯದ ಕಡೆಗೆ ಬರುತಿತ್ತು. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಕ್ಕದ ತೋಟಕ್ಕೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ಇನ್ನೂ ನಾಲ್ವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತದೇಹಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಮೃತಪಟ್ಟವರು ಹಾಗೂ ಗಾಯಾಳುಗಳ ವಿವರ ಲಭ್ಯವಾಗಿಲ್ಲ.

ಕಳೆದ ವಾರ ಇದೇ ಸ್ಥಳದಲ್ಲಿ ಭೀಕರ ಅಪಘಾತದ ನಡೆದಿತ್ತು. ನಾಲ್ವರು ಮೃತಪಟ್ಟಿದ್ದರು.

Post Comments (+)