ಭಾನುವಾರ, ನವೆಂಬರ್ 29, 2020
21 °C

ಅಪಘಾತ: ಹೊಸಕೋಟೆ ಡಿವೈಎಸ್ಪಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಮಾನ್ಯತಾ ಟೆಕ್ ಪಾರ್ಕ್ ಬಳಿ ಭಾನುವಾರ ಅಪಘಾತ ಸಂಭವಿಸಿದ್ದು, ಹೊಸಕೋಟೆ ವಿಭಾಗದ ಡಿವೈಎಸ್ಪಿ ಎನ್‌.ಬಿ. ಸಕ್ರಿ ಗಾಯಗೊಂಡಿದ್ದಾರೆ.

‘ಸಕ್ರಿ ಅವರು ಹೆಬ್ಬಾಳದಲ್ಲಿರುವ ಮನೆಯಿಂದ ಹೊಸಕೋಟೆಯಲ್ಲಿರುವ ತಮ್ಮ ಕಚೇರಿಗೆ ಪೊಲೀಸ್ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.

‘ಚಾಲಕ ಹಾಗೂ ಸಕ್ರಿ ವಾಹನದಲ್ಲೇ ಸಿಲುಕಿಕೊಂಡಿದ್ದರು. ಅವರಿಬ್ಬರನ್ನು ಸ್ಥಳೀಯರು ವಾಹನದಿಂದ ಹೊರಗೆ ತಂದು ರಕ್ಷಿಸಿದ್ದಾರೆ. ಸಕ್ರಿ ಅವರ ಎಡ ಕೈಗೆ ಗಾಯವಾಗಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು