ಸೋಮವಾರ, ಸೆಪ್ಟೆಂಬರ್ 27, 2021
25 °C

ಉರುಳಿಬಿದ್ದ ಸ್ಕೂಟಿ: ಮಹಿಳಾ ಟೆಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಆರ್.ಪುರ ಸಮೀಪದ ನ್ಯೂ ಲೈಟ್ ವೃತ್ತದ ಬಳಿ ಸ್ಕೂಟಿ ಉರುಳಿಬಿದ್ದಿದ್ದರಿಂದ, ಸಾಫ್ಟ್‌ವೇರ್‌ ಎಂಜಿನಿಯರ್ ಸುಷ್ಮಿತಾ (25) ಎಂಬುವರು ಮೃತಪಟ್ಟಿದ್ದಾರೆ.

ಕೇರಳದ ಕಾಞಂಗಾಡ್‌ನ ಸುಷ್ಮಿತಾ ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೊಡ್ಡನೆಕ್ಕುಂದಿಯಲ್ಲಿ ವಾಸವಿದ್ದರು. ಅವಘಡದಲ್ಲಿ ಸಹೋದ್ಯೋಗಿ ರಾಮಮೂರ್ತಿನಗರದ ಚೈತನ್ಯಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಸುಷ್ಮಿತಾ ಹಾಗೂ ಚೈತನ್ಯಾ ಶನಿವಾರ ನಸುಕಿನಲ್ಲಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಚೈತನ್ಯಾ ಸ್ಕೂಟಿ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಸುಷ್ಮಿತಾ ಕುಳಿತುಕೊಂಡಿದ್ದರು. ನ್ಯೂ ಲೈಟ್ ವೃತ್ತದ ಬಳಿ ನಿಯಂತ್ರಣ ತಪ್ಪಿದ್ದ ಸ್ಕೂಟಿ, ರಸ್ತೆಯಲ್ಲೇ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡ ಇಬ್ಬರೂ ರಸ್ತೆಯಲ್ಲೇ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಕೆ.ಆರ್.ಪುರ ಸಂಚಾರ ಪೊಲೀಸರು ತಿಳಿಸಿದರು.

‘ಚಿಕಿತ್ಸೆಗೆ ಸ್ಪಂದಿಸದೇ ಸುಷ್ಮಿತಾ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು