ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಕ್- ಬೊಲೆರೋ ಅಪಘಾತ; ಐವರ ಸಾವು

Last Updated 20 ನವೆಂಬರ್ 2018, 18:21 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ತಾಲ್ಲೂಕಿನ ಹೊನಗನಹಳ್ಳಿ ಬಳಿ ಮಂಗಳವಾರ ರಾತ್ರಿ ಟ್ರಕ್- ಬೊಲೆರೋ ಜೀಪ್ ನಡುವೆ ಸಂಭವಿಸಿದಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ವಿಜಯಪುರ-ಹುಬ್ಬಳ್ಳಿ ರಾಜ್ಯ ಹೆದ್ದಾರಿ 218ರಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ಪ್ರಜಾವಾಣಿಗೆ ತಿಳಿಸಿದರು.

ಅಪಘಾತದಲ್ಲಿ ಮೃತಪಟ್ಟವರು ರಸ್ತೆ ಕಾಮಗಾರಿ ಕೆಲಸಗಾರರು ಎನ್ನಲಾಗಿದ್ದು, ಕೆಲಸ ಮುಗಿಸಿಕೊಂಡು ಬೊಲೆರೊ ಜೀಪ್ನಲ್ಲಿ ಮರಳುವಾಗ ಈ ಘಟನೆ ನಡೆದಿದೆ.

ಸ್ಥಳಕ್ಕೆ ಬಬಲೇಶ್ವರ ಪೊಲೀಸರು ತೆರಳಿದ್ದು, ಅಪಘಾತ, ಮೃತರ ವಿವರ ಪಡೆಯಲಿದ್ದಾರೆ ಎಂದು ನಿಕ್ಕಂ ಮಾಹಿತಿ ನೀಡಿದರು.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT