ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ ಜಲಾಶಯದಿಂದ ನೀರು ಹರಿಸಲು ಕ್ರಮ: ಕಾರಜೋಳ

Last Updated 18 ಏಪ್ರಿಲ್ 2020, 8:33 IST
ಅಕ್ಷರ ಗಾತ್ರ

ವಿಜಯಪುರ: ಆಲಮಟ್ಟಿ ಜಲಾಶಯ(ಲಾಲ್‌ಬಹದ್ದೂರ್‌ ಶಾಸ್ತ್ರಿ)ದಿಂದ ಮುಳವಾಡ ಮತ್ತು ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಲು 2 ಟಿಎಂಸಿ ನೀರನ್ನು ಶೀಘ್ರ ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮುಳವಾಡ ಏತ ನೀರಾವರಿ ಯೋಜನೆಯ ಜಾಲದಡಿ 70 ಕೆರೆಗಳು ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಜಾಲದಡಿ 29 ಕೆರೆಗಳನ್ನು ತುಂಬಿಸಲು ನೀರು ಹರಿಸಲಾಗುವುದು ಎಂದು ಹೇಳಿದ್ದಾರೆ.

ಮೂರನೇ ಹಂತದ ಏತನೀರವಾರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಾದ ಬಸವನ ಬಾಗೇವಾಡಿ, ಮುದ್ದೆಬಿಹಾಳ, ದೇವರಹಿಪ್ಪರಗಿ ಮತ್ತು ವಿಜಯಪುರ ತಾಲ್ಲೂಕುಗಳ ಹಲವು ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದಿದ್ದಾರೆ.

ಈಗ ಹರಿಸುವ ನೀರನ್ನು ಕೇವಲ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬೇಕು. ಈ ಯೋಜನೆಯಡಿ ಬರುವ ಎಲ್ಲಾ ಸಾರ್ವಜನಿಕರು, ರೈತಾಪಿ ವರ್ಗದವರು ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ಬೇಸಿಗೆ ಇನ್ನೂ ಎರಡು ತಿಂಗಳು ಇರುವು ಹಿನ್ನೆಲೆಯಲ್ಲಿ ಈ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT