ಕುಸಿದು ಬಿದ್ದ ನಟ ದೊಡ್ಡಣ್ಣ

7

ಕುಸಿದು ಬಿದ್ದ ನಟ ದೊಡ್ಡಣ್ಣ

Published:
Updated:
Deccan Herald

ಶಕ್ತಿನಗರ (ರಾಯಚೂರು): ಇಲ್ಲಿನ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್)ದ ಅತಿಥಿಗೃಹದಲ್ಲಿ ತಂಗಿದ್ದ ಹಿರಿಯ ನಟ ದೊಡ್ಡಣ್ಣ ಮಂಗಳವಾರ ಶೌಚಾಲಯದಲ್ಲಿ ಕುಸಿದು ಬಿದ್ದರು.

ಬೆಳಿಗ್ಗೆ ಶೌಚಾಲಯಕ್ಕೆ ಹೋಗುತ್ತಿದ್ದಂತೆಯೇ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡರು. ಎರಡು ನಿಮಿಷಗಳಾದರೂ ಚೇತರಿಸಿಕೊಳ್ಳಲಿಲ್ಲ. ಅತಿಥಿ ಗೃಹದ ಸಿಬ್ಬಂದಿ ನೆರವಿಗೆ ಧಾವಿಸಿದರು. ಸ್ವಲ್ಪ ಹೊತ್ತಿನ ಬಳಿಕ ಪ್ರಜ್ಞೆ ಮರಳಿತು.

ತಕ್ಷಣವೇ ಆರ್‌ಟಿಪಿಎಸ್ ವೈದ್ಯ ಡಾ.ರಮೇಶ ಜಗ್ಲಿ ಸ್ಥಳಕ್ಕೆ ಬಂದು ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಅವರನ್ನು ಆರ್‌ಟಿಪಿಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರು. ಆಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕಳುಹಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣಮಾಸದ ಕೊನೆಯ ಸೋಮವಾರ ಪತ್ನಿ ಮತ್ತು ಪುತ್ರನೊಂದಿಗೆ ದೇವಸೂಗೂರಿನ ಸೂಗೂರೇಶ್ವರ ದೇವಸ್ಥಾನಕ್ಕೆ ಬಂದಿದ್ದರು.

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 7

  Sad
 • 0

  Frustrated
 • 1

  Angry

Comments:

0 comments

Write the first review for this !