ಬುಧವಾರ, ಜುಲೈ 28, 2021
21 °C

ಸಹನಟಿ ಆತ್ಮಹತ್ಯೆ: ಚಿಕ್ಕಮಗಳೂರಿನಲ್ಲಿ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಿರುತೆರೆ ಸಹನಟಿ ವಿ.ಕೆ. ಚಂದನಾ (29) ಎಂಬುವರ ಆತ್ಮಹತ್ಯೆ ಸಂಬಂಧ, ಅವರ ಪ್ರಿಯಕರ ಎನ್ನಲಾದ ದಿನೇಶ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ತಾವರಕೆರೆ ಮುಖ್ಯರಸ್ತೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿರುವ ಮನೆಯಲ್ಲಿ ವಾಸವಿದ್ದ ಚಂದನಾ, ಮೇ 30ರಂದು ಲೈವ್ ವಿಡಿಯೊ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೊ ಆಧರಿಸಿ ಸಂಬಂಧಿಕರು ದೂರು ನೀಡಿದ್ದರು. ಆರೋಪಿ ದಿನೇಶ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ, ಚಿಕ್ಕಮಗಳೂರಿನಲ್ಲಿರುವ  ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ. ಸಂಬಂಧಿಕರ ಮನೆಯಲ್ಲಿ ಆತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದು ಹೆಚ್ಚಿನ ಮಾಹಿತಿ ಕಲೆಹಾಕಬೇಕಿದೆ’ ಎಂದು ಪೊಲೀಸರು ಹೇಳಿದರು.

‘ತನ್ನನ್ನು ಪ್ರೀತಿಸುತ್ತಿದ್ದ ದಿನೇಶ್, ಮದುವೆಯಾಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು ಗರ್ಭಪಾತ ಮಾಡಿಸಿದ್ದಾಗಿ ಚಂದನಾ ದೂರಿದ್ದರು. ₹ 5 ಲಕ್ಷ ಪಡೆದು ವಂಚಿಸಿದ್ದನೆಂದೂ ಆರೋಪಿಸಿದ್ದರು’ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು