ಭಾನುವಾರ, ಫೆಬ್ರವರಿ 23, 2020
19 °C

ಮಂಗಳೂರು: ಆದಿತ್ಯ ರಾವ್‌ ನ್ಯಾಯಾಂಗ ಬಂಧನಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರನೇ ಜೆಎಂಎಫ್‌ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಜನವರಿ 20ರಂದು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆಯಾಗಿತ್ತು. ಜ.22ರಂದು ಆದಿತ್ಯ ರಾವ್‌ ಬೆಂಗಳೂರಿನ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಜ.23ರಂದು ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹತ್ತು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು.

ಕಸ್ಟಡಿ ಅವಧಿ ಮುಗಿದ ಕಾರಣದಿಂದ ಆರೋಪಿಯನ್ನು ಶನಿವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯನ್ನು ಮತ್ತೆ ವಶಕ್ಕೆ ನೀಡುವಂತೆ ಪೊಲೀಸರು ಅರ್ಜಿ ಸಲ್ಲಿಸಲಿಲ್ಲ. ಆದಿತ್ಯ ರಾವ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಕಿಶೋರ್‌ ಕುಮಾರ್‌ ಕೆ.ಎನ್‌. ಆದೇಶ ಹೊರಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು