ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಜೆ.ನಿರ್ಧಾರಕ್ಕೆ ವಕೀಲರ ಆಕ್ಷೇಪ

Last Updated 6 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ’ಬೆಂಗಳೂರು ಮಧ್ಯಸ್ಥಿಕೆ ಕೇಂದ್ರವು ಪ್ರತಿ ಭಾನುವಾರವೂ ಕಾರ್ಯ ನಿರ್ವಹಿಸಲಿದೆ’ ಎಂಬ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರ ನಿರ್ಧಾರಕ್ಕೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

‘ಮುಖ್ಯ ನ್ಯಾಯಮೂರ್ತಿಗಳು ಈ ಕುರಿತಂತೆ ವಕೀಲರ ಜೊತೆ ಚರ್ಚೆ ನಡೆಸಿಲ್ಲ. ಇದೊಂದು ಏಕಪಕ್ಷೀಯ ನಿರ್ಧಾರ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪ್ರಕಟಿಸಿರುವ ಈ ನಿರ್ಧಾರ. ಆದ್ದರಿಂದ ಕೂಡಲೇ ಎಲ್ಲರ ಜೊತೆಗೂ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಮಾಡಿದ್ದಾರೆ.

‘ನಗರದ ವಕೀಲರು ಈಗಾಗಲೇ ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ನಗರದ ಸಂಚಾರ ದಟ್ಟಣೆಯ ನಡುವೆ ಬಿಡುವಿಲ್ಲದ ಶ್ರಮ ವಹಿಸಿ ದುಡಿಯುತ್ತಿದ್ದು ಮಾನಸಿಕ ಒತ್ತಡದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ 24X7 ಕಾರ್ಯ ನಿರ್ವಹಿಸಬೇಕು ಎಂಬ ಇರಾದೆ ಒಳ್ಳೆಯದಲ್ಲ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT