6 ವರ್ಷದ ನಂತರ ಆರಂಭಗೊಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ

ಮಂಗಳವಾರ, ಜೂನ್ 25, 2019
30 °C
ಹಿರಿಯೂರು ತಾಲ್ಲೂಕಿನ ಯಳಗೊಂಡನಹಳ್ಳಿ

6 ವರ್ಷದ ನಂತರ ಆರಂಭಗೊಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ

Published:
Updated:
Prajavani

ಹಿರಿಯೂರು: ವಿದ್ಯಾರ್ಥಿಗಳ ಹಾಜರಾತಿ ಕೊರತೆಯಿಂದ ಆರು ವರ್ಷಗಳ ಹಿಂದೆ ಮುಚ್ಚಿದ್ದ ತಾಲ್ಲೂಕಿನ ಯಳಗೊಂಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದು ಕ್ಷೇತ್ರ ಶಿಕ್ಷಣಾಧಿಕಾರಿ, ಗ್ರಾಮಸ್ಥರ ಸಹಕಾರದಿಂದ ಪುನರಾರಂಭಗೊಂಡಿದೆ.

‘ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರ ನಿರಾಸಕ್ತಿ. ಶಿಕ್ಷಕರ ಅಲಕ್ಷ್ಯದಿಂದ 2012-13ರಲ್ಲಿ ಶಾಲೆಯನ್ನು ಮುಚ್ಚಲಾಗಿತ್ತು. ಇಲ್ಲಿ ಒಂದರಿಂದ ಆರನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿತ್ತು. ಶಾಲೆಯನ್ನು ಉಳಿಸಿಕೊಳ್ಳುವತ್ತ ಗಂಭೀರ ಪ್ರಯತ್ನ ನಡೆದಿರಲಿಲ್ಲ. ಈಗ ಗ್ರಾಮಸ್ಥರು ಹಾಗೂ ಪೋಷಕರ ಪ್ರೋತ್ಸಾಹದಿಂದ 12 ಮಕ್ಕಳು ಸೇರಿದ್ದು, ಶಾಲೆ ಮತ್ತೆ ಆರಂಭಗೊಂಡಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ. ನಟರಾಜ್ ಹೇಳಿದರು.

‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಯೋಜನೆಯಡಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಕ್ಷೀರಭಾಗ್ಯ, ಬಿಸಿಯೂಟ, ವಿದ್ಯಾರ್ಥಿವೇತನ ಎಲ್ಲವೂ ದೊರೆಯಲಿದೆ. ಮಕ್ಕಳನ್ನು ತಪ್ಪದೆ ಶಾಲೆಗೆ ಕಳಿಸುವ ಮೂಲಕ ಗುಣಮಟ್ಟದ ಶಿಕ್ಷಣ ಪಡೆಯಲು ಪೋಷಕರು ಸಹಕರಿಸಬೇಕು. ಸರ್ಕಾರಿ ಶಾಲೆಗಳು ಇದ್ದರೆಷ್ಟು, ಮುಚ್ಚಿದರೆಷ್ಟು ಎಂಬ ಮನೋಭಾವವನ್ನು ಶಿಕ್ಷಕರು ಬಿಟ್ಟು, ಮುಂದಿನ ವರ್ಷ ಮಕ್ಕಳ ಸಂಖ್ಯೆ ಪ್ರತಿ ತರಗತಿಗೆ 24 ಆಗುವಂತೆ ನೋಡಿಕೊಳ್ಳಬೇಕು’ ಎಂದು ಅವರು ಸೂಚಿಸಿದರು.

‘ಗ್ರಾಮದಲ್ಲಿನ ಸರ್ಕಾರಿ ಶಾಲೆ ಮುಚ್ಚಿದ್ದಕ್ಕೆ ಸ್ಥಳೀಯ ಯುವಕರಲ್ಲಿ ತೀವ್ರ ಅಸಮಾಧಾನ ಇತ್ತು. ಸ್ಥಿತಿವಂತರು ನಗರದ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿದ್ದರು. ಆದರೆ ಬಡ ಮಕ್ಕಳು ಶಿಕ್ಷಣ ವಂಚಿತರಾಗಿದ್ದರು. ಬಿಇಒ ಹಾಗೂ ಅಧಿಕಾರಿಗಳ ಪ್ರಯತ್ನದಿಂದ ಮುಚ್ಚಿದ್ದ ಶಾಲೆ ಮತ್ತೆ ಆರಂಭಗೊಂಡಿದೆ’ ಎಂದು ಗ್ರಾಮದ ಮುಖಂಡ ವೀರಮಲ್ಲೇಗೌಡ ಸಂತಸ ವ್ಯಕ್ತಪಡಿಸಿದರು.

ಶಾಲೆ ಪ್ರಾರಂಭೋತ್ಸವ ಸಮಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಶಶಿಧರ್, ಲೋಹಿತ್, ಸಿಆರ್ ಪಿ ಲೋಕಮ್ಮ, ಯಶೋದಮ್ಮ, ಗ್ರಾಮದ ಮುಖಂಡರಾದ ಎಲ್. ಮೋಹನ್, ವೀರೇಂದ್ರ, ನಾಗೇಶ್, ಗುರುಸಿದ್ದಪ್ಪ, ನಾರಾಯಣಪ್ಪ, ಲೋಕಣ್ಣ, ಮಂಜಣ್ಣ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !