ಕೃಷಿ ಸಾಲ; ರೈತರಿಗೆ ಬಂಧನ ವಾರಂಟ್: ರೈತರ ಹಿತಕ್ಕೆ ಸಿಎಂ ಸೂಚನೆ

7

ಕೃಷಿ ಸಾಲ; ರೈತರಿಗೆ ಬಂಧನ ವಾರಂಟ್: ರೈತರ ಹಿತಕ್ಕೆ ಸಿಎಂ ಸೂಚನೆ

Published:
Updated:

ಬೆಂಗಳೂರು: ಕೃಷಿ ಸಾಲ ಪಡೆದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮದ ಐವರು ರೈತರಿಗೆ ಆ್ಯಕ್ಸಿಸ್ ಬ್ಯಾಂಕ್ ಈಚೆಗೆ ಕೋಲ್ಕತ್ತ ನ್ಯಾಯಾಲಯದ ಮೂಲಕ ಬಂಧನ ವಾರಂಟ್ ಹೊರಡಿಸಿದೆ. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆಯನ್ನೂ ನಡೆಸಿದ್ದಾರೆ. ಇದರ ಬೆನ್ನಲ್ಲೇ ರೈತರ ಹಿತ ಕಾಯುವಂತೆ ಮುಖ್ಯಮಂತ್ರಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಆ್ಯಕ್ಸಿಸ್ ಬ್ಯಾಂಕ್ ಕೋಲ್ಕತ್ತದ ನ್ಯಾಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ರೈತರ ಮೇಲೆ ಮೊಕದ್ದಮೆ ದಾಖಲಿಸಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ರೈತರ ಹಿತ ಕಾಯುವಂತೆ ನಿರ್ದೇಶಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್‌ ಮಾಡಿದ್ದಾರೆ.

‘‌ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಬೆಂಬಲಕ್ಕಿದೆ’ ಎಂದು ಭರವಸೆ ನೀಡಿರುವ ಸಿಎಂ ಈ ಪ್ರಕರಣಗಳ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿ ಮತ್ತೊಂದು ಟ್ವಿಟ್‌ ಮಾಡಿದ್ದಾರೆ. 

* ಇದನ್ನೂ ಓದಿ...

* ಎಕ್ಸಿಸ್ ಬ್ಯಾಂಕ್‌ನಲ್ಲಿ ಸಾಲ: ಕೋಲ್ಕತ್ತಾ ನ್ಯಾಯಾಲಯದಿಂದ ರೈತರಿಗೆ ಬಂಧನ ವಾರಂಟ್

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !