ಮಂಗಳವಾರ, ಏಪ್ರಿಲ್ 7, 2020
19 °C

ಬರೀ ಘೋಷಣೆಯೊಂದೇ ದೊಡ್ಡ ಸಾಧನೆಯಲ್ಲ: ಎಚ್‌ಡಿಕೆಗೆ ಬಿ.ಸಿ.ಪಾಟೀಲ್ ಟಾಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹಾವೇರಿ: ಎಚ್.ಡಿ. ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪು ರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರಿಯಾಗಿ ಯೋಜನೆ ರೂಪಿಸದೇ ಕುಮಾರಸ್ವಾಮಿ ಬಾಯಿಗೆ ಬಂದಂತೆ ಸಾಲಮನ್ನಾ ಘೋಷಣೆ ಮಾಡಿ ಹೋಗಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರು ಮಾಡಿದ್ದಾರೆ. ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ ಎಂದರು.

ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಘೋಷಣೆ ಮಾಡಿ ಹೋಗುವುದಕ್ಕಿಂತ ನುಡಿದಂತೆ ನಡೆದುಕೊಳ್ಳುವುದು ಮುಖ್ಯ ಎಂದು ಹೇಳಿದರು.

ರೈತರ ಸಾಲಮನ್ನಾ ಮಾಡಲು ಹಂತ ಹಂತವಾಗಿ ದಾಖಲಾತಿ ಪರಿಶೀಲಿಸಲಾಗುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ ವಿರೋಧ ಪಕ್ಷ ಸ್ಥಾನದಲ್ಲಿದ್ದಾರೆ. ಹೀಗಾಗಿ ವಿರೋಧ ಮಾಡುವುದು ಅವರ ಆ ಜನ್ಮ ಸಿದ್ಧ ಹಕ್ಕು ಎಂದು ತಿಳಿದುಕೊಂಡಿದ್ದಾರೆ. ಇರುವ ಇತಿಮಿತಿಯ ಅನುದಾನದಲ್ಲಿಯೇ ಯಡಿಯೂರಪ್ಪನವರು ಸಮತೋಲನದ ಬಜೆಟ್ ನೀಡಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ‌ ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು