ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಿಂದ ಆಗುಂಬೆ ಘಾಟಿ ಸಂಚಾರ ನಿಷೇಧ

ದ್ವಿತೀಯ ಪಿಯುಸಿ ಪರೀಕ್ಷೆಯಿಂದಾಗಿ ದುರಸ್ತಿ ಕಾರ್ಯ ಮುಂದೂಡಿಕೆ
Last Updated 28 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿ ರಸ್ತೆ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದ್ದು, ಮಾರ್ಚ್ 19ರಿಂದ ಏಪ್ರಿಲ್‌ 19ರವರೆಗೆ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದ್ದಾರೆ.

ದುರಸ್ತಿ ಹಿನ್ನೆಲೆಯಲ್ಲಿ ಈ ಹಿಂದೆ ಮಾರ್ಚ್ 1ರಿಂದ 31ರವರೆಗೆ ಆಗುಂಬೆ ಘಾಟಿ ರಸ್ತೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾರ್ಚ್ 19ರಿಂದ ದುರಸ್ತಿ ಕಾರ್ಯವನ್ನು ಆರಂಭಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಅವರು ಸೂಚಿಸಿದ್ದಾರೆ.

ಪರ್ಯಾಯ ವ್ಯವಸ್ಥೆ: ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು,
ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು
ತೀರ್ಥಹಳ್ಳಿ–ಕೊಪ್ಪ–ಶೃಂಗೇರಿ-ಮಾಳಾಘಾಟ್‌–ಕಾರ್ಕಳ–ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು.

ಭಾರೀ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಸುರಿ ಬಸ್‌ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳು ತೀರ್ಥಹಳ್ಳಿ–ಮಾಸ್ತಿಕಟ್ಟೆ–ಹೊಸಂಗಡಿ–ಸಿದ್ದಾಪುರ–ಕುಂದಾಪುರ–ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT