ಸೋಮವಾರ, ಸೆಪ್ಟೆಂಬರ್ 23, 2019
22 °C

ಪುರಿ ಅರ್ಜಿ ಸಲ್ಲಿಕೆ

Published:
Updated:

ನವದೆಹಲಿ : ಅಗಸ್ಟಾ ವೆಸ್ಟ್‌ಲ್ಯಾಂಡ್‌ ಅತಿಗಣ್ಯರ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶರಣಾಗುವುದಾಗಿ ಉದ್ಯಮಿ ರತುಲ್‌ ಪುರಿ ದೆಹಲಿ ಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್‌ ಅವರ ಸೋದರಳಿಯ ಪುರಿ ಅವರನ್ನು ಬ್ಯಾಂಕಿಗೆ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಈಗಾಗಲೇ ಬಂಧಿಸಿದೆ. 

ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಪುರಿ ಸಲ್ಲಿಸಿದ ಅರ್ಜಿ ಸ್ವೀಕರಿಸಿ, ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. 

ಪುರಿ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ವಾರಂಟ್‌ ಅನ್ನು ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ಬುಧವಾರ ವಜಾಗೊಳಿಸಿತ್ತು.

Post Comments (+)