ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದಲ್ಲಿ ತಪ್ಪು ಅಭಿಪ್ರಾಯಗಳ ಬಿತ್ತನೆ’

ಎಐಡಿಎಸ್‌ಒ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನಕ್ಕೆ ಚಾಲನೆ
Last Updated 24 ಆಗಸ್ಟ್ 2019, 17:15 IST
ಅಕ್ಷರ ಗಾತ್ರ

ಬೆಂಗಳೂರು: ‘ಧರ್ಮನಿರಪೇಕ್ಷತೆ ಎಂದರೆ ಮುಸ್ಲಿಮರನ್ನು ಓಲೈಸುವ ಧೋರಣೆ ಎಂಬ ತಪ್ಪು ಅಭಿಪ್ರಾಯಗಳನ್ನು ಬಿತ್ತಲಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಯುವಜನತೆ ಜ್ಞಾನ ಸಂಪಾದನೆ ಮೂಲಕ ಭವಿಷ್ಯದ ಸವಾಲುಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ’ ಎಂದು ಎಸ್‌ಯುಸಿಐ (ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಫ್ ಇಂಡಿಯಾ–ಕಮ್ಯುನಿಸ್ಟ್‌ ಪಕ್ಷ) ಪಾಲಿಟ್‌ ಬ್ಯೂರೊ ಸದಸ್ಯ ಕೆ.ರಾಧಾಕೃಷ್ಣ ಅಭಿಪ್ರಾಯಪಟ್ಟರು.

ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) 7ನೇ ರಾಜ್ಯ ಮಟ್ಟದ ಮೂರು ದಿನಗಳ ವಿದ್ಯಾರ್ಥಿ ಸಮ್ಮೇಳನದ ಬಹಿರಂಗ ಅಧಿವೇಶನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಬಹುತ್ವ ಮರೆಯಾಗುತ್ತಿದ್ದು, ಮೀಸಲಾತಿ ಬೇಕೊ–ಬೇಡವೊ ಎಂಬ ಚರ್ಚೆ ಶುರುವಾಗಿರುವ ಈ ಸಂದರ್ಭದಲ್ಲಿ ವೈಜ್ಞಾನಿಕ, ಜನತಾಂತ್ರಿಕ ಮತ್ತು ಧರ್ಮನಿರಪೇಕ್ಷ ಶಿಕ್ಷಣದ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT