ಶನಿವಾರ, ಜುಲೈ 31, 2021
23 °C
ಶೇ 77ರಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗೆ ಗೈರು: ಎಐಡಿಎಸ್‌ಒ

‘ಆನ್‌ಲೈನ್‌ ತರಗತಿ ಆಧರಿಸಿ ಪರೀಕ್ಷೆ ಬೇಡ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನ್‌ಲೈನ್‌ ತರಗತಿ ಆಧಾರದ ಮೇಲೆ ಪರೀಕ್ಷೆ ನಡೆಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ (ವಿಟಿಯು) ಮುಂದಾಗಿದೆ. ಆದರೆ, ಸ್ಮಾರ್ಟ್‌ಫೋನ್, ನೆಟ್‌ವರ್ಕ್‌ ಕೊರತೆಯ ಪರಿಣಾಮ ಶೇ 77ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಈ ‌ತರಗತಿಗಳಿಗೆ ಗೈರು ಹಾಜರಾಗಿದ್ದಾರೆ. ಈಗ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಎಐಡಿಎಸ್‌ಒ ಹೇಳಿದೆ. 

‘ಸರ್ಕಾರದ ಒತ್ತಡದಿಂದ ವಿಟಿಯು ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ ನಡೆಸಿದೆ. ಆದರೆ, ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಹಾಜರಾಗಿದ್ದ ಅನೇಕರಿಗೆ ಪಾಠವೂ ಅರ್ಥವಾಗಿಲ್ಲ. ಎಐಡಿಎಸ್‌ಒ ಮತ್ತು ವಿಟಿಯು ವಿದ್ಯಾರ್ಥಿಗಳ ಹೋರಾಟ ಸಮಿತಿ ನಡೆಸಿದ ಸಮೀಕ್ಷೆಯಲ್ಲಿ, ಆನ್‌ಲೈನ್‌ ತರಗತಿಗಳ ಆಧಾರದ ಮೇಲೆ ನಡೆಸುವ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ಶೇ 97ರಷ್ಟು ವಿದ್ಯಾರ್ಥಿಗಳು ಹೇಳಿದ್ದಾರೆ. ರಾಜ್ಯದ 210 ಎಂಜಿನಿಯರಿಂಗ್‌ ಕಾಲೇಜುಗಳ 4 ಸಾವಿರ ವಿದ್ಯಾರ್ಥಿಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು’ ಎಂದು ಸಂಘಟನೆ ತಿಳಿಸಿದೆ. 

‘ವಿಶ್ವವಿದ್ಯಾಲಯವು ಆನ್‌ಲೈನ್‌ ತರಗತಿ ಆಧಾರದ ಮೇಲೆ ಪರೀಕ್ಷೆ ನಡೆಸುವ ನಿರ್ಧಾರ ವಾಪಸ್‌ ತೆಗೆದುಕೊಳ್ಳಬೇಕು. ಆಫ್‌ಲೈನ್‌ ತರಗತಿ ಮಾಡಿ ಪರೀಕ್ಷೆ ನಡೆಸಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಸರ್ಕಾರ ಕೂಡ ಈ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಎಐಡಿಎಸ್‌ಒ ಒತ್ತಾಯಿಸಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು