ಸೋಮವಾರ, ಜನವರಿ 27, 2020
27 °C

ಪೇಜಾವರ ಶ್ರೀಗಳ ಚಿಕಿತ್ಸೆಗೆ ದೆಹಲಿಯ ಏಮ್ಸ್‌ ವೈದ್ಯರ ತಂಡದ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ  ಪೇಜಾವರ ಶ್ರೀಗಳಿಗೆ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್ ತಜ್ಞ ವೈದ್ಯರ ನೆರವು ಪಡೆಯಲಾಗುತ್ತಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲದ ಕೆಎಂಸಿ ವೈದ್ಯರು ತಿಳಿಸಿದ್ದಾರೆ‌.

ಸೋಮವಾರ ಸಂಜೆ ಹೆಲ್ತ್ ಬಿಡುಗಡೆ ಮಾಡಿದ ಆಸ್ಪತ್ರೆ ವೈದ್ಯರು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಸಹ ಮಣಿಪಾಲಕ್ಕೆ ಬಂದಿದ್ದು ಶ್ರೀಗಳ ಚಿಕಿತ್ಸೆಗೆ ಅಗತ್ಯ ನೆರವು ನೀಡುತ್ತಿದ್ದಾರೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ ಸಂಜೆ ಕೇಂದ್ರ ಸಚಿವೆ ಉಮಾಭಾರತಿ ಆಸ್ಪತ್ರೆಗೆ ಭೇಟಿನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು