ಶನಿವಾರ, ಜನವರಿ 25, 2020
25 °C

ಪೊನ್ನಂಪೇಟೆ ಬಳಿ ಹಳ್ಳಕ್ಕೆ ಉರುಳಿದ ಐರಾವತ ಬಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊನ್ನಂಪೇಟೆ: ಮೈಸೂರಿನಿಂದ ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಯ ಐರಾವತ ಬಸ್ ಶುಕ್ರವಾರ ಮುಂಜಾನೆ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ.

ಮುಂಜಾನೆ ಸಂಭವಿಸಿದ ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಸ್ಥಳೀಯರು ಬಸ್‌ನಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಬೇರೊಂದು ವಾಹನದಲ್ಲಿ ಕೇರಳಕ್ಕೆ ಕಳುಹಿಸಿದ್ದಾರೆ.

ಬೆಳಗ್ಗಿನ ಜಾವ ದಟ್ಟವಾಗಿ ಮಂಜು ಕವಿದಿತ್ತು.‌ ಸರಿಯಾಗಿ ರಸ್ತೆಯೂ ಕಾಣಿಸುತ್ತಿರಲಿಲ್ಲ. ರಸ್ತೆಯೂ ಕಿರಿದಾಗಿದ್ದು ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಉರುಳಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು