ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಾರಿಗೆ ಯತ್ನಿಸಿದ್ದ ಮಹಿಳೆ ವಶಕ್ಕೆ

Last Updated 25 ಮೇ 2020, 20:36 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೆನ್ನೈನಿಂದ ಬಂದಿಳಿದು ಕ್ವಾರಂಟೈನ್‌ಗೆ ಹೋಗದೇ ಪರಾರಿಯಾಗಲು ಯತ್ನಿಸಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇಶೀಯ ವಿಮಾನಗಳ ಹಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಸೋಮವಾರ ಬೆಳಿಗ್ಗೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ಪರಾರಿಯಾಗಲು ಯತ್ನಿಸಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

‘ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕರನ್ನು ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿ ಕ್ವಾರಂಟೈನ್ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಆದರೆ, ಮಹಿಳೆ ತಪಾಸಣಾ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದರು’ ಎಂದು ಪೊಲೀಸರು ಹೇಳಿದರು.

’ಹೋಟೆಲ್‌ನಲ್ಲಿ ಕ್ವಾರಂಟೈನ್‌ ಇರಲು ಮಹಿಳೆಗೆ ಇಷ್ಟವಿರಲಿಲ್ಲ. ಹೀಗಾಗಿ ಅವರು ನಿಲ್ದಾಣದಿಂದ ಪರಾರಿಯಾಗಿ ಮನೆಗೆ ಹೊರಟಿದ್ದರು. ನಿಲ್ದಾಣ ಬಳಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪುನಃ ಕ್ವಾರಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT