ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ನೀತಿ ಖಂಡಿಸಿ ಜ.8ರಂದು ದೇಶವ್ಯಾಪಿ ಮುಷ್ಕರ: ಎಐಟಿಯುಸಿ

Last Updated 14 ಡಿಸೆಂಬರ್ 2019, 8:22 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜ.8ರಂದು ದೇಶವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಎಐಟಿಯುಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮರಜೀತ್ ಕೌರ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.30ರಂದು ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳು ಭಾಗವಹಿಸಲಿದ್ದು, 25 ಕೋಟಿ ಜನರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ. ಕಾರ್ಪೊರೇಟ್ ವ್ಯವಸ್ಥೆಗೆ ಅನುಕೂಲ ಮಾಡಿಕೊಡುತ್ತಿದೆ. 44 ಕಾರ್ಮಿಕ ಕಾನೂನುಗಳನ್ನು ಸೇರಿಸಿ, 4 ಕಾನೂನು ಮಾಡುವ ಮೂಲಕ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಎಂದು ಅಮರಜೀತ್ ದೂರಿದರು.

ಧರ್ಮದ ಆಧಾರದಲ್ಲಿ ಒಡೆದು ಆಳುವ ತುಕಡೆ ಗ್ಯಾಂಗ್ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT