ಬುಧವಾರ, ಆಗಸ್ಟ್ 4, 2021
22 °C

ಅಕ್ಕಮಹಾದೇವಿ ಮಹಿಳಾ ವಿವಿ: ಪ್ರಭಾರ ಕುಲಪತಿಯಾಗಿ ಪ್ರೊ.ಕಾಕಡೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಶುಕ್ರವಾರ ನಿವೃತ್ತರಾದ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಕಾಕಡೆ ಅವರ ಅಧಿಕಾರ ಅವಧಿ ಜೂನ್‌ 20 ರಿಂದ ಡಿಸೆಂಬರ್‌ 13ರ ವರೆಗೆ ಅಥವಾ ನೂತನ ಕುಲಪತಿ ನೇಮಕ ಆಗುವವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ: ಪ್ರೊ.ಸಬಿಹಾ ಭೂಮಿಗೌಡ ಅವರು ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಅವರಿಗೆ ಶುಕ್ರವಾರ ಅಧಿಕಾರ ಹಸ್ತಾಂತರಿಸಿದರು.

ಸೇವೆಯಿಂದ ನಿವೃತ್ತರಾದ ಪ್ರೊ.ಸಬಿಹಾ ಅವರನ್ನು ವಿಶ್ವವಿದ್ಯಾಲಯದಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಪ್ರೊ.ಸಬಿಹಾ ಅವರು ತಮ್ಮ ಮಾತೃ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠಕ್ಕೆ ಮರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು