ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ ಜಲಾಶಯ: ಒಂದೇ ದಿನ 6.3 ಟಿಎಂಸಿ ಅಡಿ ನೀರು

Last Updated 11 ಜುಲೈ 2020, 14:47 IST
ಅಕ್ಷರ ಗಾತ್ರ

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಶನಿವಾರ ಮತ್ತೆ 6.37 ಟಿಎಂಸಿ ಅಡಿ ನೀರು ಹರಿದು ಬಂದಿದೆ. ಇದರಿಂದಾಗಿ ಒಂದೇ ವಾರದಲ್ಲಿ (ಜುಲೈ 5 ರಿಂದ 11ರ ವರೆಗೆ) ಜಲಾಶಯಕ್ಕೆ 23.25 ಟಿಎಂಸಿ ಅಡಿ ನೀರು ಹರಿದು ಬಂದಂತಾಗಿದೆ.

123.081 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 89 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಹೊರ ಹರಿವು ಹೆಚ್ಚಳ: 20 ಸಾವಿರ ಕ್ಯುಸೆಕ್ ಇದ್ದ ಆಲಮಟ್ಟಿ ಜಲಾಶಯದ ಹೊರಹರಿವನ್ನು ಶನಿವಾರ ಬೆಳಿಗ್ಗೆ 11ಕ್ಕೆ 35,000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ.

235 ಮೆಗಾ ವಾಟ್‌ ವಿದ್ಯುತ್‌ ಉತ್ಪಾದನೆ: 35,000 ಕ್ಯುಸೆಕ್ ನೀರನ್ನು ಆಲಮಟ್ಟಿ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ ನದಿಗೆ ಹರಿಸಲಾಗುತ್ತಿದ್ದು, ಎಲ್ಲಾ ಘಟಕಗಳು ಕಾರ್ಯಾರಂಭಗೊಂಡಿವೆ. ಇದರಿಂದ 235 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು‌ ಜಲಾಶಯದ ಮೂಲಗಳು ತಿಳಿಸಿವೆ.

519.60 ಮೀಟರ್‌ ಗರಿಷ್ಠ ಎತ್ತರದ ಜಲಾಶಯದಲ್ಲಿ 517.36 ಮೀಟರ್‌ ವರೆಗೆ ನೀರು ಸಂಗ್ರಹವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT