ಶುಕ್ರವಾರ, ಫೆಬ್ರವರಿ 26, 2021
19 °C
ಸೆ.10ರಂದು ಸರ್ವಪಕ್ಷ ಸದಸ್ಯರೊಂದಿಗೆ ದೆಹಲಿಗೆ

ಅತಿವೃಷ್ಟಿ ಹಾನಿಗೆ ನೆರವು ಕೋರಿ ಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗ: ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹಾಸನ: ‘ಜಿಲ್ಲೆಯೂ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಪರಿಹಾರಕ್ಕಾಗಿ ನೆರವು ಕೋರಲು ಸೆ.10ರಂದು ಸರ್ವಪಕ್ಷ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು’ ಎಂದು ಸಂಸದ ಎಚ್.ಡಿ.ದೇವೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೇಟಿಗೆ ಪ್ರಧಾನಿ ಸಮಯ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್, ಬಿಜೆಪಿ ನಾಯಕರೂ ಆಗಮಿಸುವರು. ಅತಿವೃಷ್ಟಿ ಹಾನಿಯ ಪ್ರಮಾಣವನ್ನು ಪ್ರಧಾನಿಗೆ ಮನವರಿಕೆ ಮಾಡಲಾಗುವುದು’ ಎಂದು ತಿಳಿಸಿದರು. 

‘ಹಾಸನ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಸಾರ್ವಜನಿಕ ಆಸ್ತಿ ಜೊತೆಗೆ ಕಾಫಿ, ಏಲಕ್ಕಿ, ಮೆಣಸು ಸೇರಿ ಕೋಟ್ಯಾಂತರ ರೂಪಾಯಿ ಮೌಲ್ಯದ ವಾಣಿಜ್ಯ ಬೆಳೆ ನಷ್ಟವಾಗಿದೆ. ಇದಕ್ಕೆ ಪರಿಹಾರ ಕಲ್ಪಿಸಲು ನೆರವು ಕೋರಲಾಗುವುದು’ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು