ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಇದೇ 6 ಮತ್ತು 7ರಂದು ‘ಆಳ್ವಾಸ್ ಪ್ರಗತಿ 2018'-10ನೇ ವರ್ಷದ ಬೃಹತ್ ಉದ್ಯೋಗ ಮೇಳ ಇಲ್ಲಿನ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
‘600 ಹೆಸರಾಂತ ಕಂಪನಿಗಳು ಭಾಗವಹಿಸಲಿದ್ದು, 2 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 12 ಸಾವಿರ ಅಭ್ಯರ್ಥಿಗಳು ಪ್ರಗತಿ ಮೇಳದಲ್ಲಿ ಭಾಗಹಿಸುವ ನಿರೀಕ್ಷೆಯಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.
ವಿಪುಲ ಉದ್ಯೋಗಾವಕಾಶ ನೀಡುವ ಕ್ಷೇತ್ರಗಳಾದ ಐಟಿ, ಐಟಿಇಎಸ್, ಮ್ಯಾನುಫ್ಯಾಕ್ಚರಿಂಗ್, ಸೇಲ್ಸ್ ಹಾಗೂ ರಿಟೇಲ್ಸ್, ಬ್ಯಾಂಕಿಂಗ್ ಹಾಗೂ ಫೈನಾನ್ಸ್, ಹಾಸ್ಪಿಟಾಲಿಟಿ, ಎನ್‌ಜಿಒ ಹಾಗೂ ಶಿಕ್ಷಣ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಈ ಬಾರಿಯ ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುತ್ತಿವೆ.
ಮಾಹಿತಿಗಾಗಿ 9611686148, 9663190590, ಅಭ್ಯರ್ಥಿಗಳ ನೋಂದಣಿಗಾಗಿ www.alvaspragati.com ಸಂಪರ್ಕಿಸಲು ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.