ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಆಯ್ಕೆ 

7
13ರಂದು ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರದಾನ

ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಆಯ್ಕೆ 

Published:
Updated:
Deccan Herald

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 'ಆಳ್ವಾಸ್ ನುಡಿಸಿರಿ'ಗೆ ಪೂರಕವಾಗಿ ನಡೆಯುವ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರ ಸಿರಿ ಮತ್ತು ವ್ಯಂಗ್ಯ ಚಿತ್ರ ಸಿರಿಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಮಂಗಳೂರಿನ ಗಣೇಶ್ ಸೋಮಯಾಜಿ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ, ಖ್ಯಾತ ವನ್ಯಜೀವಿ ಛಾಯಾಚಿತ್ರಗ್ರಾಹಕ ಎಸ್.ತಿಪ್ಪೇಸ್ವಾಮಿ ಆಳ್ವಾಸ್ ಛಾಯಾಚಿತ್ರಸಿರಿ ಪ್ರಶಸ್ತಿಗೆ ಹಾಗೂ ವ್ಯಂಗ್ಯಚಿತ್ರ ಪ್ರವೀಣರಾದ ಕೆ.ಆರ್.ಸ್ವಾಮಿ ಅವರನ್ನು ಆಳ್ವಾಸ್ ವ್ಯಂಗ್ಯಚಿತ್ರಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

‘ಇದೇ 13ರಂದು ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !