ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ₹ 50 ಲಕ್ಷ ಪರಿಹಾರ

ಒಟ್ಟು ₹33.85 ಕೋಟಿ ಕೊಡುಗೆ
Last Updated 30 ಸೆಪ್ಟೆಂಬರ್ 2019, 14:01 IST
ಅಕ್ಷರ ಗಾತ್ರ

ಮೂಡುಬಿದಿರೆ: ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹ 50 ಲಕ್ಷ ಪರಿಹಾರ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಇಲ್ಲಿ ಪ್ರಕಟಿಸಿದರು.

2019-20 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾಮಾಜಿಕ ಚಟುವಟಿಕೆಗಳಿಗೆ ₹33.85 ಕೋಟಿಯ ವಿವಿಧ ‘ಕೊಡುಗೆ’ಗಳ ವಿವಿರವನ್ನು ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಡಾ.ಎಂ.ಮೋಹನ ಆಳ್ವರ ಯೋಜನೆಗಳು ಶ್ಲಾಘನೀಯ. ಈ ನಿಟ್ಟಿನಲ್ಲಿ ಈ ವರ್ಷ ₹33.85 ಕೋಟಿ ಶಿಕ್ಷಣ ಹಾಗೂ ಸಮಾಜ ಸೇವೆಗೆ ವ್ಯಯಿಸುತ್ತಿದ್ದಾರೆ. ನಿಮ್ಮ ಒಳ್ಳೆಯ ಕಾರ್ಯಗಳಿಗೆ ನಮ್ಮ ಬೆಂಬಲ ಇದೆ' ಎಂದರು.

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಮಾತನಾಡಿ, ‘ಸಮಗ್ರ ಶಿಕ್ಷಣ ಪರಿಕಲ್ಪನೆಯ ಶಿಕ್ಷಣವು ಆಳ್ವಾಸ್‌ ಮೂಲಕ ಸಿಗುತ್ತಿರುವುದು ಆಶಾದಾಯಕ ಬೆಳವಣಿಗೆ’ ಎಂದರು.

ಪೇಜಾವರ ಮಠದ ಗೋವರ್ಧನಗಿರಿ ಟ್ರಸ್ಟ್‌ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ₹ 1 ಲಕ್ಷದ ಚೆಕ್ ಅನ್ನು ನೀಡಲಾಯಿತು.

ಕನ್ನಡ ಮತ್ತು ಸಂಸ್ಕತಿ, ಪ್ರವಾಸೋದ್ಯಮ ಹಾಗೂ ಸಕ್ಕರೆ ಸಚಿವ ಸಿ.ಟಿ ರವಿ ಮಾತನಾಡಿ , ‘ಬಾಂಬ್ ದಾಳಿಯಿಂದ ನಾಶವಾಗಿದ್ದ ಜಪಾನ್ ಮತ್ತೆ ಶ್ರೀಮಂತ ರಾಷ್ಟ್ರವಾಗಿ ಎದ್ದು ನಿಲ್ಲಲು ,ಅಲ್ಲಿನ ಶಿಕ್ಷಣ ವ್ಯವಸ್ಥೆ ಕಾರಣ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡುವವರಿಗೆ ಸರ್ಕಾರದ ಬೆಂಬಲ ಸದಾ ಇದೆ’ ಎಂದರು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT