ಸೋಮವಾರ, ಜುಲೈ 4, 2022
22 °C

ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂಬರೀಷ್ ಅವರ ಅಂತ್ಯಕ್ರಿಯೆ ವೀಕ್ಷಿಸಲು ಬಂದಿರುವ ಸಾವಿರಾರು ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಂಠೀರವ ಸ್ಟುಡಿಯೊದ ಆಡಳಿತ ಕಚೇರಿಯ ಮುಂಭಾಗದಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಗಣ್ಯರು, ನಟ, ನಟಿಯರು ತೆರಳಲು ಅವಕಾಶ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿಯೇ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗವಾಗಿ ಚಿತ್ರರಂಗದ ನಟ, ನಟಿಯರು ತೆರಳುವಾಗ ಅಭಿಮಾನಿಗಳು ಜೈಕಾರ ಮೊಳಗಿಸುತ್ತಿದ್ದಾರೆ.

ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ರಂಗಾಯಣ ರಘು, ಜೈಜಗದೀಶ್, ಚೇತನ್, ನಿರ್ದೇಶಕ ಎಸ್.ನಾರಾಯಣ್ ಸೇರಿದಂತೆ ಹಲವು‌ ಕಲಾವಿದರು ಈಗಾಗಲೇ ಬಂದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು