ಇಂದು ಅಮಿತ್‌ ಶಾ ರೋಡ್‌ ಶೋ

ಶುಕ್ರವಾರ, ಏಪ್ರಿಲ್ 26, 2019
21 °C

ಇಂದು ಅಮಿತ್‌ ಶಾ ರೋಡ್‌ ಶೋ

Published:
Updated:

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ಸಂಜೆ 6ಕ್ಕೆ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಬನಶಂಕರಿ ದೇವಸ್ಥಾನದಿಂದ ಒಂದು ಕಿ.ಮೀ. ದೂರದ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸುಮಾರು 10 ಸಾವಿರ ಮಂದಿ ಭಾಗಿಯಾಗಲಿದ್ದಾರೆ. ಇದರಿಂದಾಗಿ ನಗರದಲ್ಲಿ ಬಿಜೆಪಿ ಪರ ಅಲೆ ಇನ್ನಷ್ಟು ಹೆಚ್ಚಾಗಲಿದ್ದು, ಕಾರ್ಯಕರ್ತರಲ್ಲಿ ಹುರುಪು ಜಾಸ್ತಿಯಾಗಲಿದೆ ಎಂದು ಶಾಸಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ತೇಜಸ್ವಿನಿ ಭಾಗಿ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್‌ ನಿರಾಕರಿಸುವ ಬಗ್ಗೆ ಸೌಜನ್ಯಕ್ಕೂ ಮಾಹಿತಿ ನೀಡದ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿರುವ ತೇಜಸ್ವಿನಿ ಅನಂತಕುಮಾರ್ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !