ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಬೆಂಗಳೂರು ಕಚೇರಿ ಮೇಲೆ ಇಡಿ ದಾಳಿ

Last Updated 25 ಅಕ್ಟೋಬರ್ 2018, 14:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿರುವಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ದಾಳಿ ನಡೆಸಿದೆ.

ಮಾನವ ಹಕ್ಕುಗಳ ಸಂಸ್ಥೆಯಾಗಿರುವ ಆಮ್ನೆಸ್ಟಿ ಕಚೇರಿಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಆರೋಪದ ಸಂಬಂಧ ಆಮ್ನೆಸ್ಟಿ ಸಂಸ್ಥೆ ವಿರುದ್ಧ ಇಡಿ ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಮ್ನೆಸ್ಟಿ ವಿರುದ್ಧ 2016ರಲ್ಲಿಯೂ ಐಪಿಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣದಲ್ಲಿ ಸಂಸ್ಥೆ ಭಾಗಿಯಾಗಿರುವಆರೋಪದ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು.

ಗ್ರೀನ್‌ಪೀಸ್‌ ಇಂಡಿಯಾ ಸಂಸ್ಥೆಯ ಮೇಲೆ ಇಡಿ ದಾಳಿಯ ಬಳಿಕ 400 ಸ್ವಯಂ ಸೇವಾ ಸಂಸ್ಥೆಗಳು ಒಗ್ಗೂಡಿ, ಎನ್‌ಜಿಒಗಳ ದನಿಯನ್ನು ಅಡಗಿಸಲು ಕೇಂದ್ರ ಸರ್ಕಾರ ದಬ್ಬಾಳಿಕೆಯ ಕ್ರಮಗಳನ್ನು ಅನುಸರಿಸಬಾರದು ಎಂದು ಆಗ್ರಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT