ಬೆಂಗಳೂರು: ‘ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹ ಆರೋಪ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ನರೋನಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಮಂಡ್ಯದ ವಕೀಲ ಎಚ್. ಎಲ್. ವಿಶಾಲ ರಘು ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ಪ್ರಕರಣ ದಾಖಲಿಸಿರುವ ಉಪ್ಪಾರಪೇಟೆ ಪೊಲೀಸರು ಮತ್ತು ತನಿಖಾಧಿಕಾರಿ ನಿಗದಿತ ಅವಧಿಯಲ್ಲಿ ತನಿಖಾ ವರದಿ ಹಾಗೂ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದರಿಂದಾಗಿಯೇ ಕಾನೂನಿನಡಿಯ ಅವಕಾಶ ಬಳಸಿಕೊಂಡು ಅಮೂಲ್ಯ ಜಾಮೀನು ಪಡೆದಿದ್ದಾರೆ. ಆದ್ದರಿಂದ, ತನಿಖಾಧಿಕಾರಿ ಅಮಾನತು ಮಾಡಲು ಮತ್ತು ಅಮೂಲ್ಯ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ: ಅಮೂಲ್ಯ ಲಿಯೋನ್ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣದಲ್ಲಿ ಸರ್ಕಾರದ ಪರ ವಾದಿಸಲು ಐ.ಎಸ್.ಪ್ರಮೋದ್ ಚಂದ್ರ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.