ಸೋಮವಾರ, ಜೂನ್ 14, 2021
28 °C

ಜಾಮೀನು ಅರ್ಜಿ ಹಿಂದಕ್ಕೆ; ಜೈಲಿನಲ್ಲೇ ಅಮೂಲ್ಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದೇಶದ್ರೋಹ ಆರೋಪದಡಿ ಬಂಧಿಸಲಾಗಿರುವ ಅಮೂಲ್ಯಾ ಲಿಯೋನ್ (19) ಜಾಮೀನು ಅರ್ಜಿಯನ್ನು ಗುರುವಾರ ಹಿಂದಕ್ಕೆ ಪಡೆಯಲಾಗಿದೆ. 

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 20ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಅಮೂಲ್ಯಾ ಲಿಯೋನ್, ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ಆಕೆಯನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿ ಪುನಃ ಜೈಲಿಗೆ ಬಿಟ್ಟಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಜಾಮೀನು ನೀಡಲು ಅವಕಾಶ ಇಲ್ಲದ ಕಾರಣದಿಂದಾಗಿ ಜಾಮೀನು ಅರ್ಜಿಯನ್ನು ಅಮೂಲ್ಯಾ ಪರ ವಕೀಲರು ಹಿಂದಕ್ಕೆ ಪಡೆದರು.

ಪ್ರಕರಣದ ವಿಚಾರಣೆ ನಡೆಸಿದ 5ನೇ ಎಸಿಎಂಎಂ ನ್ಯಾಯಾಧೀಶರು, ಅಮೂಲ್ಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಾ. 18ರವರೆಗೆ ವಿಸ್ತರಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು