ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಸರ್ಕಾರಿ ಭೂಮಿ ನೀಡಿರುವುದನ್ನು ಆಕ್ಷೇಪಿಸಿ ಆನಂದ್‌ ಸಿಂಗ್‌ ಪತ್ರ

Last Updated 1 ಜುಲೈ 2019, 8:48 IST
ಅಕ್ಷರ ಗಾತ್ರ

ಬೆಂಗಳೂರು:ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ3667.31 ಎಕರೆ ಭೂಮಿಯನ್ನುಜಿಂದಾಲ್ ಕಂಪನಿಗೆ ನೀಡುವುದನ್ನು ಆಕ್ಷೇಪಿಸಿವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರುಗೃಹ ಸಚಿವ ಎಂ ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತುಜೂನ್‌ 27ರಂದು ಪತ್ರ ಬರೆದಿದ್ದು, ‘ಕಂಪನಿಗೆ ಭೂಮಿ ನೀಡುವುದರ ಸಾಧಕ-ಬಾಧಕ ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುವುದನ್ನು ಸ್ವಾಗತಿಸುತ್ತೇನೆ. ಸರ್ಕಾರದ ನಿರ್ಧಾರ ಅಥವಾ ಕಾರ್ಖಾನೆಯ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಮ್ಮ ಜಿಲ್ಲೆಯ ರೈತರು, ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈಆಕ್ಷೇಪಣೆಗಳನ್ನು ಸಲ್ಲಿಸಿದ್ದೇನೆ’ ಎಂದು ವಿವರಿಸಿದ್ದಾರೆ.

ತಾವು ರಾಜೀನಾಮೆ ನೀಡಲು ಜಿಂದಾಲ್‌ ಕಂಪನಿಗೆ ಸರ್ಕಾರ ಭೂಮಿ ನೀಡಿರುವುದೂ ಒಂದು ಕಾರಣ ಎಂದು ಆನಂದ್‌ ಸಿಂಗ್‌ ಹೇಳಿದ್ದಾರೆ.

‘ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಜೆಎಸ್‌ಡಬ್ಲ್ಯು ತನ್ನ ಕೈಗಾರಿಕಾ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಲು ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಯ ಆಸೆ ತೋರಿಸಿದೆ. ಸಿಎಸ್ಆರ್ ನಿಧಿಯಿಂದ ಜಿಲ್ಲೆಯ ಅಭಿವೃದ್ಧಿಯಲ್ಲಿ ತಾವು ಸಹ ಭಾಗಿಯಾಗುತ್ತೇವೆ ಎಂದು ನಂಬಿಸಿ, ಸರ್ಕಾರದ ವತಿಯಿಂದ ಅನೇಕ ಸವಲತ್ತುಗಳನ್ನು ಪಡೆದುಕೊಂಡಿದೆ. ಈಗ ಈ ಕಂಪನಿ ಸರ್ಕಾರಿ ಭೂಮಿಯನ್ನು ತಮ್ಮ ಹೆಸರಿನಲ್ಲಿ ಕ್ರಯಕ್ಕೆ ಮಾಡಿಕೊಳ್ಳಲು ಹವಣಿಸುತ್ತಿದೆ. ಇದುವರೆಗೆ ಜಿಂದಾಲ್ ಕಂಪನಿ ಸುಮಾರು 11,000 ಎಕರೆಗಿಂತಲೂ ಹೆಚ್ಚು ಭೂಮಿಯನ್ನು ಸರ್ಕಾರದಿಂದ ಪಡೆದುಕೊಂಡಿದೆ. ಈ ಜಾಗದ ಪ್ರಸ್ತುತ ಸ್ಥಿತಿಗತಿಯನ್ನು ಸಮಿತಿ ಪರಿಶೀಲನೆ ಮಾಡಬೇಕು. ಅದೇ ರೀತಿ 11,000 ಎಕರೆಯಷ್ಟು ಬೃಹತ್ ಭೂಮಿಯನ್ನು ಪಡೆದ ಮೇಲೂ ಪುನಃ 3,667 ಎಕರೆ ಭೂಮಿಯ ಅವಶ್ಯಕತೆ ಏನಿದೆ ಎಂಬುದನ್ನು ಅರಿಯಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

’3,667 ಎಕರೆ ಭೂಮಿ ಈ 11,000 ಎಕರೆ ಭೂಮಿಯ ಭಾಗವಾಗಿದ್ದಲ್ಲಿ, ಈ ಭೂಮಿಯಲ್ಲಿ ಕಾರ್ಖಾನೆಯವರು ಈವರೆಗೂ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಒಂದು ವೇಳೆ 3,667 ಎಕರೆ ಭೂಮಿಯಲ್ಲಿ ಅಭಿವೃದ್ಧಿಯಾಗಿದ್ದರೆ ಅದನ್ನು ಶುದ್ಧ ಕ್ರಯಕ್ಕೆ ಪಡೆದುಕೊಳ್ಳುವ ಅನಿವಾರ್ಯತೆ ಏನು? ಲೀಸ್‌ನಲ್ಲೇ ಮುಂದುವರಿಸಬಹುದಲ್ಲವೇ? ಎಂದು ಪ್ರಶ್ನಿಸಿರುವ ಅವರು, ಯಾವುದೇ ಕಾರಣಕ್ಕೂ ಈ ಭೂಮಿಯನ್ನು ಶುದ್ಧ ಕ್ರಯಕ್ಕೆ ನೀಡದೆ ಲೀಸ್ ಅವಧಿಯಲ್ಲಿಯೇ ಮುಂದುವರಿಸಬೇಕು’ ಎಂದು ಬೇಡಿಕೆ ಇಟ್ಟಿದ್ದಾರೆ.

‘ಜಿಂದಾಲ್ ಕಂಪನಿಯವರು ಸರ್ಕಾರದಿಂದ ಪಡೆದ ಭೂಮಿಗಿಂತ ಹೆಚ್ಚು ಭೂಮಿಯನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಒಂದುಸರ್ವೇ ಮಾಡಿಸಬೇಕು. ಈ ವಿಷಯದ ಬಗ್ಗೆಯೂ ಸಹ ಕಾಳಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ಎಂದು ಪತ್ರದಲ್ಲಿಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT