ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಲನ ಸೃಷ್ಟಿಸಿದ ಶಾಸಕ ಆನಂದ್‌ ಸಿಂಗ್‌ ರಾಜೀನಾಮೆ

Last Updated 1 ಜುಲೈ 2019, 9:51 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿಯ ವಿಜಯನಗರ ಕಾಂಗ್ರೆಸ್‌ಶಾಸಕ ಆನಂದ್‌ ಸಿಂಗ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚನ ಸೃಷ್ಟಿಯಾಗಿದೆ. ಆದರೆ, ಸ್ಪೀಕರ್‌ ಮಾತ್ರ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು, ನನಗ್ಯಾವ ಶಾಸಕರೂ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ.

ಆನಂದ್‌ ಸಿಂಗ್‌ ಅವರು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ ಅವರ ಕಾರ್ಯದರ್ಶಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ, ಸ್ಪೀಕರ್‌ ಅವರು ಇದನ್ನು ನಿರಾಕರಿಸಿದ್ದಾರೆ. ನನ್ನನ್ನು ಯಾರೂ ಭೇಟಿಯಾಗಿ ರಾಜೀನಾಮೆ ಕೊಟ್ಟಿಲ್ಲ. ಒಂದು ವೇಳೆ ಯಾವುದೇ ಶಾಸಕ ರಾಜೀನಾಮೆ ನೀಡಿದರೆ, ಪರಾಮರ್ಶೆ ಮಾಡಿ ಅಂಗೀರಿಸಲಾಗುವುದು ಎಂದು ತಿಳಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ ಬಯಸುವ ಯಾವುದೇ ಶಾಸಕ ಖುದ್ದಾಗಿ ಸ್ಪೀಕರ್‌ ಅವರನ್ನು ಭೇಟಿಯಾಗಿ, ಕಾರಣ ಸಹಿತ ರಾಜೀನಾಮೆ ಪತ್ರ ನೀಡಬೇಕು. ನಂತರ ಅದನ್ನು ಪರಾಮರ್ಶೆ ನಡೆಸಿ ಸ್ಪೀಕರ್‌ ಅವರು ಅಂಗೀಕರಿಸುತ್ತಾರೆ. ಆದರೆ, ಸದ್ಯ ಆನಂದ್‌ ಸಿಂಗ್‌ ಅವರು ಸ್ಪೀಕರ್‌ ಅವರ ಕಾರ್ಯದರ್ಶಿಗೆ ಪತ್ರ ನೀಡಿರುವುದರಿಂದ ಅದನ್ನುಪರಿಗಣನೆಗೆ ಪಡೆಯುವ ಸಾಧ್ಯತೆಗಳಿಲ್ಲ ಎಂದು ಹೇಳಾಗಿದೆ.

ಈ ನಡುವೆ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸುತ್ತಿದ್ದು, ಇದರಲ್ಲಿ ಮಹತ್ವದ ರಾಜಕೀಯ ಅಂಶಗಳು ಹೊರಬೀಳುವ ಸಾಧ್ಯತೆಗಳಿವೆ ಎಂಬ ನಿರೀಕ್ಷೆಗಳಿವೆ.

ಇನ್ನು, ಕಳೆದ ತಿಂಗಳು 27ರಂದು ಸಚಿವ ಎಂ.ಬಿ ಪಾಟೀಲ ಅವರಿಗೆ ಪತ್ರ ಬರೆದಿರುವ ಆನಂದ್‌ ಸಿಂಗ್‌ ಅವರು ಜಿಂದಾಲ್‌ ಸಂಸ್ಥೆಗೆ ಭೂಮಿ ನೀಡುತ್ತಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT